Monday, August 15, 2022

Latest Posts

ಪ್ರವಾಹ ಪರಿಹಾರ ನಿಧಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ: ರಾಜ್ಯಕ್ಕೆ 577 ಕೋಟಿ ರೂ. ನೆರವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರವಾಹದಿಂದ ತತ್ತರಿಸಿದ ಉತ್ತರ ಕರ್ನಾಟಕದ ಸಂತ್ರಸ್ತರಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಿಂದ 577.84 ಕೋಟಿ ರೂ. ಮುಂಗಡ ಪರಿಹಾರ ಮಂಜೂರು ಮಾಡಿದೆ.

ಮುಂಗಾರು ಹಂಗಾಮಿನಲ್ಲಿ ರಾಜ್ಯದಾದ್ಯಂತ ಭಾರಿ ಮಳೆಯಿಂದ  ಭೂಕುಸಿತ ಮತ್ತು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ಈ ಮೂಲಕ ನೆರವು ದೊರೆಯಲಿದ್ದು, ಇಂದು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ.

ಉತ್ತರ ಕರ್ನಾಟಕದ ಸಂತ್ರಸ್ತರಿಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಿಂದ 577.84 ಕೋಟಿ ರೂ. ಮುಂಗಡ ಪರಿಹಾರ ಮಂಜೂರು ಮಾಡಿದೆ.  ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ 4,381.88 ಕೋಟಿ ರೂ ನೆರವು ನೀಡಲು ಅನುಮೋದನೆ ನೀಡಿದೆ. ಇತರ ಐದು ರಾಜ್ಯಗಳಿಗೂ ನೈಸರ್ಗಿಕ ವಿಕೋಪ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಲಾಗಿದೆ

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss