Monday, August 8, 2022

Latest Posts

ಪ್ರವಾಹ ಭೀತಿ ಸ್ಧಳಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಭೇಟಿ

ಮಂಡ್ಯ : ಕೆ.ಆರ್.ಎಸ್ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲ್ಲೆಯಲ್ಲಿ ನದಿ ಪಾತ್ರದ ಪ್ರದೇಶಗಳಾದ ದೊಡ್ಡೆಗೌಡನಕೊಪ್ಪಲು, ನಿಮಿಂಷಾಭ ದೇವಸ್ಧಾನ ಹಾಗೂ ವೆಲ್ಲೆಸ್ಲಿ ಸೇತುವೆ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೆಲ್ಲೆಸ್ಲಿ ಸೇತುವೆ ಹಿತದೃಷ್ಠಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಹಾಗೂ ಪಾದಚಾರಿಗಳು ಸಂಚರಿಸದಂತೆ ತಾತ್ಕಲಿಕ ತಡೆಗೋಡೆ ನಿರ್ಮಿಸಿ ಪ್ರವೇಶ ನಿರ್ಬಂಧಿಸಿದ್ದು ನದಿ ಪ್ರವಾಹ ಕಡಿಮೆಯಾದ ನಂತರ ಜನರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ಪ್ರವಾಸಿಗರು ಸ್ಧಳಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ ಹಾಗೂ ಪೆÇೀಲಿಸ್ ನಿರಂತರವಾಗಿ ಗಸ್ತು ತಿರುಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಪಾಂಡವಪುರ ಉಪ ವಿಭಾಗಧಿಕಾರಿ ಶಿವಮೂರ್ತಿ ಹಾಗೂ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಹಾಗೂ ಇತರರು ಉಪಸ್ಧಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss