Wednesday, June 29, 2022

Latest Posts

ಪ್ರಾದೇಶಿಕ ಭಾಷೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅನುಮತಿ ನೀಡಿ: ಪ್ರಧಾನಿಗೆ ಪತ್ರ ಬರೆದ ಕೆಸಿಆರ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅನುಮತಿ ನೀಡುವಂತೆ ಒತ್ತಾಯಿಸಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸ್ತುತ ಪಿಎಸ್‌ಯು, ರೈಲ್ವೆ, ರಕ್ಷಣಾ ಸೇವೆ ಮತ್ತು ರಾಷ್ಟ್ರೀಕೃತ ಬ್ಯಾಂಕ್​ ಹುದ್ದೆಗಳ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತಿದ್ದು, ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು, ಆದರೆ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಕಷ್ಟವಾಗುತ್ತಿದೆ ಎಂದು ಅವರು ತಿಳಿಸಿದರು.
ಭಾರತದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಮಾನ ಮತ್ತು ನ್ಯಾಯಯುತವಾದ ಅವಕಾಶ ಒದಗಿಸುವ ಸಲುವಾಗಿ ಅಭ್ಯರ್ಥಿಗಳಿಗೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು. ಜೊತೆಗೆ ಯುಪಿಎಸ್‌ಸಿ ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು, ಸಾರ್ವಜನಿಕ ವಲಯದ ಬ್ಯಾಂಕ್​​ಗಳು, ಆರ್‌ಬಿಐ, ಸಿಬ್ಬಂದಿ ಆಯ್ಕೆ ಆಯೋಗ ಹೀಗೆ ಎಲ್ಲ ಏಜೆನ್ಸಿಗಳು ಅನುಮತಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss