ಹೊಸದಿಗಂತ ವರದಿ, ಮಂಡ್ಯ:
ನೇಣು ಬಿಗಿದ ಸ್ಥಿತಿಯಲ್ಲಿ ಪ್ರಿಯತಮೆಯ ಮನೆಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಮಂಡ್ಯದ ಚೆನ್ನಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ತಳಗವಾದಿ ಗ್ರಾಮದ ಸುಮಾರು 40 ವರ್ಷದ ಸಿದ್ದರಾಜು ಮೃತ ದುರ್ದೈವಿ. ಈತ ಇಂದು ಚೆನ್ನಪ್ಪನದೊಡ್ಡಿ ಗ್ರಾಮದಲ್ಲಿರುವ ಪ್ರಿಯತಮೆಯ ಮನೆಗೆ ಹೋಗಿದ್ದು, ಅಲ್ಲಿ ಇಬ್ಬರ ನಡುವೆ ಕಲಹ ಉಂಟಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
ಮೃತ ಸಿದ್ದರಾಜು ಕುಟುಂಬದವರು ಇದೊಂದು ಕೊಲೆ ಎಂದು ಆರೋಪಿಸಿ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿದ್ದರಾಜುಗೆ ಈಗಾಗಲೇ ಮದುವೆಯಾಗಿದ್ದು, ಮತ್ತೊಬ್ಬ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇವರಿಬ್ಬರ ನಡುವೆ ಕಲಹ ಉಂಟಾಗಿ ನೇಣಿಗೆ ಶರಣಾಗಿದ್ದಾನೆ ಎಂದೂ ಹೇಳಲಾಗಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.