Monday, August 8, 2022

Latest Posts

ಫಡ್ನವಿಸ್-ರೌತ್ ಭೇಟಿ ಬಳಿಕ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಶರದ್ ಪವಾರ್!

ಮುಂಬೈ: ಮಹಾರಾಷ್ಟ್ರದಲ್ಲಿ ಸೆ.27 ರಂದು ಸರಣಿ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್- ಶಿವಸೇನೆಯ ವಕ್ತಾರ ಸಂಜಯ್ ರೌತ್ ಭೇಟಿಯ ಬೆನ್ನಲ್ಲೇ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಭೇಟಿ ನೀಡಿದ್ದಾರೆ..
ದೇವೇಂದ್ರ ಫಡ್ನವೀಸ್ ಅವರು ಸಂಜಯ್ ರೌತ್ ಅವರನ್ನು ಭೇಟಿ ಮಾಡಿದ್ದು ಸಂಚಲನ ಮೂಡಿಸಿತ್ತು. ಠಾಕ್ರೆ ನಿವಾಸದಲ್ಲಿ ಉಭಯ ನಾಯಕರ ಸಭೆ ಸುಮಾರು 40 ನಿಮಿಷಗಳ ನಡೆದಿದೆ.ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಮತ್ತು ಸೋಂಕಿ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅಸಲಿಗೆ ಉಭಯ ನಾಯಕರ ನಡುವೆ ನಡೆದ ಚರ್ಚೆ ಏನು ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದು ಪಿಟಿಐ ವರದಿ ಮಾಡಿದೆ.
ದೇವೇಂದ್ರ ಫಡ್ನವೀಸ್ ತಾವು ಶಿವಸೇನೆಯ ಮುಖವಾಣಿ ಸಾಮ್ನಾಗೆ ಸಂದರ್ಶನ ನೀಡಲು ಸಂಜಯ್ ರೌತ್ ನ್ನು ಭೇಟಿ ಮಾಡಿದ್ದಾಗಿ ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss