Saturday, June 25, 2022

Latest Posts

ಫಾರೂಕ್ ಅಬ್ದುಲ್ಲಾ ಗೃಹ ಬಂಧನದಿಂದ ಮುಕ್ತಿ: 7 ತಿಂಗಳ ನಂತರ ಬಿಡುಗಡೆ

ಶ್ರೀನಗರ: ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಜಮ್ಮು ಕಾಶ್ಮೀರ ಸರ್ಕಾರ ಹಿಂಪಡೆದಿದೆ.

ಆ.5 2019ರಂದು ಕೇಂದ್ರ ಸರ್ಕಾರ ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿತು. ನಂತರ ಫಾರೂಕ್ ಅಬ್ದುಲ್ಲಾ, ಪುತ್ರ ಓಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ನಾಯಕರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ 7 ತಿಂಗಳ ಕಾಲ ಗೃಹಬಂಧನದಲ್ಲಿ ಇರಿಸಲಾಗಿತ್ತು

ಸಾರ್ವಜನಿಕ ಸುರಕ್ಷತಾ ಕಾಯ್ದೆ 1978ರ ಸೆಕ್ಷನ್ 19(1) ಅಡಿಯಲ್ಲಿನ ಅಧಿಕಾರ ಬಳಸಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನ ಆದೇಶವನನ್ನು ರದ್ದುಪಡಿಸಿದೆ. ಈ ಕುರಿತು ಶ್ರೀನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss