ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯ ನಿಶ್ಚಿತಾರ್ಥ ಫೆ.1 ರಂದು ನಡೆಯಲಿದೆ.
ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ಏಪ್ರಿಲ್ ನಲ್ಲಿ ಹಸೆಮಣೆ ಏರಲಿದ್ದಾರೆ.
ಸದ್ಯ ಹುಡುಗಿ ರೇವತಿ ಅವರ ಮನೆಗೆ ನಿಖಿಲ್ ಕುಮಾರಸ್ವಾಮಿ ಕುಟುಂಬ ಭೇಟಿ ನೀಡಿ ಹೆಣ್ಣು ನೋಡುವ ಶಾಸ್ತ್ರ ಮಾಡಿದ್ದಾರೆ. ಅದರಂತೆ ರೇವತಿ ಕುಟುಂಬ ಕೂಡ ನಿಖಿಲ್ ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ ಮದುವೆ ಮಾತುಕತೆ ನಡೆಸಿದೆ. ಎರಡು ಕುಟುಂಬಗಳು ಫೆ.10ಕ್ಕೆ ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿವೆ.
ಎಚ್. ಡಿ.ಕುಮಾರಸ್ವಾಮಿ ಮತ್ತು ಕುಟುಂಬದವರು ದೇವರು ಹಾಗೂ ಶಾಸ್ತ್ರ, ಸಂಪ್ರದಾಯಗಳಲ್ಲಿ ನಂಬಿಕೆ ಉಳ್ಳವರಾಗಿದ್ದು, ನಿಖಿಲ್ ಕುಮಾರಸ್ವಾಮಿಯ ವಿವಾಹವನ್ನು ಶಾಸ್ತ್ರೋಕ್ತವಾಗಿ ಮಾಡಲು ಇಚ್ಛಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.