ಹೊಸದಿಗಂತ ಆನ್ಲೈನ್ ಡೆಸ್ಕ್:
ಫೆ.14 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಪುತ್ರಿ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಮೊಮ್ಮಗನ ವಿವಾಹ ನಿಶ್ಚಯವಾಗಿದ್ದು,ರಾಜಕೀಯ ಗಣ್ಯರು ಉಪಸ್ಥಿತರಿರಲಿದ್ದಾರೆ.
ಇಬ್ಬರು ರಾಜಕೀಯ ಗಣ್ಯರ ಮನೆ ಮದುವೆ ಇದಾಗಿರುವುದರಿಂದ ಪ್ರತಿಷ್ಟಿತ ರಾಜಕಾರಣಿಗಳಿಗೆ ಆಹ್ವಾನ ನೀಡಲಾಗಿದೆ. ಡಿಕೆಶಿ ಪುತ್ರಿ ಐಶ್ವರ್ಯಾ ಮತ್ತು ಕಾಫಿ ಡೇ ಸಂಸ್ಥಾಪಕ ದಿ.ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಅವರ ಅದ್ಧೂರಿ ವಿವಾಹದಲ್ಲಿ ರಾಹುಲ್ ಗಾಂಧಿ,ಕೆಸಿ ವೇಣುಗೋಪಾಲ್,ರಣ್ದೀಪ್ ಸುರ್ಜೇವಾಲಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಇನ್ನು ಸಿಎಂ ಯಡಿಯೂರಪ್ಪ,ಡಿಸಿಎಂ ಹಾಗೂ ಸಚಿವರು ಕೂಡ ಆಗಮಿಸಲಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಿವಾಹ ಜರುಗಲಿದ್ದು, ಫೆ.17 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.