Saturday, July 2, 2022

Latest Posts

ಫೆ. 7ರಂದು ಅದ್ದೂರಿಯಾಗಿ ನಡೆಯಲಿದೆ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

ಹೊಸ ದಿಗಂತ ವರದಿ, ಚಾಮರಾಜನಗರ:

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆಯುವ ರಾಜ್ಯ ಮಟ್ಟದ 2020ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ , ತಜ್ಞ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಸಮಾರಂಭ ಫೆ. 7 ರಂದು ಚಾಮರಾಜನಗರದಲ್ಲಿ ಅದ್ದೂರಿಯಾಗಿ ನಡೆಯಲಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಜಾನಪದ ಆಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಪ್ರಥಮವಾಗಿ ನಡೆಯುವ ಜಾನಪದ ಅಕಾಡೆಮಿಯ ರಾಜ್ಯದ ವಾರ್ಷಿಕ ಗೌರವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಜಿಲ್ಲಾಡಳಿತ ಹಾಗು ಕರ್ನಾಟಕ ಜಾನಪದ ಅಕಾಡೆಮಿ ಮಾಡಿಕೊಟ್ಟಿದೆ. ಊರಿನ ಹಬ್ಬದ ಮಾದರಿಯಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗಿದೆ. 2020ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕತರಾದ 30 ಮಂದಿ ಜಾನಪದ ಕಲಾವಿದರು. ಇಬ್ಬರು ತಜ್ಞ ಪ್ರಶಸ್ತಿ ಪುರಸ್ಕೃತರು ಹಾಗೂ ಇಬ್ಬರು ಪುಸ್ತಕ ಬಹುಮಾನಿತರನ್ನು ಸಕಲ ಗೌರರವದೊಂದಿಗೆ ಜಿಲ್ಲಾಡಳಿತ ಭವನದಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನದ ದವರೆಗೆ ಸವಾರ್ಲಕೃತ ಎತ್ತಿನ ಗಾಡಿಯಲ್ಲಿ ಕರೆದೊಯ್ಯಗಳಾಗುತ್ತದೆ.
ಬೆಳಗ್ಗೆ 9 ಗಂಟೆಗೆ 11 ಜಾನಪದ ಕಲಾತಂಡಗಳಾದ ನಾದಸ್ವರ, ಗೊರವರ ಕುಣಿತ, ಕಂಸಾಳೆ, ವೀರಗಾಸೆ, ಹುಲಿವೇಷ,
ಗೊರುಕಾನ ನೃತ್ಯ, ನಗಾರಿ ನೃತ್ಯ, ದೊಳ್ಳು ಕುಣಿತ, ಮರಗಾಲು ಕಂಸಾಳೆ, ಕಂಡಾಯ, ತಮಟೆ ನಾದನ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಯಲಿದೆ.
ಫೆ.7ರ  ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಪ್ರಶಸ್ತಿ ಪ್ರಧಾನ ಮತ್ತು ಉದ್ಟಾಟನೆಯನ್ನು ಕನ್ನಡ ಮತ್ತು ಸಂಸ್ಕತಿ ಇಲಾಖೆಯ
ಸಚಿವ ಅರವಿಂದ ಲಿಂಬಾವಳಿ ನೆರವೇರಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಪರಿಚಯ ಮತ್ತು ಪುಸ್ತಕ ಬಿಡುಗೆಯನ್ನು ಜಿಲ್ಲಾ ಉಸ್ರುವಾರಿ
ಸಚಿವ ಸುರೇಶ್‍ಕುಮಾರ್ ಮಾಡಲಿದ್ದಾರೆ. ಸ್ಥಳಿಯ ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಗೀತ ನಿರ್ದೇಶಕ ಡಾ. ಹಂಸಲೇಖ ಅಭಿನಂದನಾ ನುಡಿ ಸಲ್ಲಿಸುವವರು. ಪ್ರಾಸ್ತಾವಿಕವಾಗಿ ಕರ್ನಾಟಕ ಜಾನಪದ ಆಕಾಡೆಮಿ ಅಧ್ಯಕ್ಷ ಡಾ. ಮಂಜಮ್ಮ
ಜೋಗತಿ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಆಶ್ವಿನಿ, ಸಂಸದ ಆರ್. ಧ್ರುವನಾರಾಯಣ್, ಶಾಸಕರಾದ ಸಿ.ಎನ್. ನಿರಂಜನ್‍ಕುಮಾರ್, ಆರ್. ನರೇಂದ್ರ, ಎನ್. ಮಹೇಶ್ ಮೊದಲಾದವರು ಭಾಗವಹಿಸಲಿದ್ದಾರೆ. ಪುಸ್ತಕರ ಬಹುಮಾನಿತರಾಗಿ 2018 ನೇ ಸಾಲಿನ ಪುಸ್ತಕ ಪ್ರಶಸ್ತಿಯನ್ನು ಡಾ. ಮಮ್ತಾಜ್ ಬೇಗಂ, 2019ನೆ ಸಾಲಿನ ಪುಸ್ತಕ ಪ್ರಶಸ್ತಿಯನ್ನು ಡಾ. ಎಚ್.ಡಿ. ಪೋತೆ ಅವರು ಪಡೆದುಕೊಂಡಿದ್ದಾರೆ ಎಂದು ಮಂಜಮ್ಮ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಜಾನಪದ ಆಕಾಡೆಮಿ ಸದಸ್ಯ ಸಿ.ಎಂ. ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss