ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವುದು ಒಂದು ದಿನ ವಿಳಂಬವಾಗಲಿದೆ.
ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ಈ ಬಗ್ಗೆ ಮಾಹಿತಿ ನೀಡಿದ್ದು, “ಶಶಿಕಲಾ ಅವರು ಫೆ.7 ಬದಲು ಫೆ.8 ರಂದು ತಮಿಳುನಾಡಿಗೆ ಬರಲಿದ್ದಾರೆ” ಎಂದು ತಿಳಿಸಿದ್ದಾರೆ.
ಶಶಿಕಲಾ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಬೇಕೆಂದು ಶಶಿಕಲಾ ಪರ ಕಾರ್ಯಕರ್ತರು ತಮಿಳುನಾಡಿನಲ್ಲಿ ಕೆಲವು ತಿಂಗಳ ಹಿಂದೆ ಭಾರೀ ಸಿದ್ಧತೆ ಮಾಡಿಕೊಂಡಿದ್ದು, ಬೆಂಗಳೂರಿನಿಂದ ಚೆನ್ನೈ ಮಾರ್ಗದಲ್ಲಿ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ.
ಮೂಲಗಳ ಪ್ರಕಾರ ಫೆ.8ರಂದು ತಮಿಳುನಾಡಿಗೆ ಪ್ರಯಾಣ ಬೆಳೆಸಲಿರುವ ಶಶಿಕಲಾ ನಟರಾಜನ್ ಮೊದಲು ಚೆನ್ನೈನಲ್ಲಿನ ಜಯಲಲಿತಾ ಅವರ ಸ್ಮಾರಕಕ್ಕೆ ಭೇಟಿ ನೀಡಲಿರುವ ಸಾಧ್ಯತೆ ಇದೆ.