ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಫೇಸ್ ಬುಕ್’ನಲ್ಲಿ ಕಪಲ್ ಚಾಲೆಂಜ್ :ಫೋಟೋ ಅಪ್ಲೋಡ್ ಮಾಡುವ ಮುನ್ನ ಪೋಲಿಸರು ಬಿಚ್ಚಿಟ್ಟಿರುವ ಈ ಭಯಾನಕ ಸತ್ಯವನ್ನು ಓದಿ

ಪುಣೆ: ಇದೀಗ ಫೇಸ್ ಬುಕ್ ನಲ್ಲಿ ಕಪಲ್ ಚಾಲೆಂಜ್ ಟ್ರೆಂಡ್ ಪ್ರಾರಂಭವಾಗಿದೆ. ಲಕ್ಷಾಂತರ ಜನ ತಮ್ಮ ಸಂಗಾತಿಯೊಂದಿಗಿನ ಫೋಟೊವನ್ನು ಫೇಸ್ ಬುಕ್ ನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ರೀತಿಯ ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಹಂಚಿಕೊಳ್ಳುವ ಮೊದಲು ಎಚ್ಚರಿಕೆ ವಹಿಸುವಂತೆ ಪುಣೆ ಪೊಲೀಸರು ಸಲಹೆ ನೀಡಿದ್ದಾರೆ.

ಹೌದು ಪುಣೆ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಇಂಥ ಚಾಲೆಂಜ್ ಹೆಸರಿನಲ್ಲಿ ಆಗುತ್ತಿರುವ ಭಯಾನಕ ಸತ್ಯವನ್ನು ಬಿಚ್ಚಿಟ್ಟಿದ್ದು. ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಹಂಚಿಕೊಳ್ಳುವ ಮೊದಲು ಎಚ್ಚರವಹಿಸುವಂತೆ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಫೋಟೋಗಳು ಬಹಳಷ್ಟು ದುಪಯೋಗ ಆಗುತ್ತಿರವ ಬಗ್ಗೆ ದೂರುಗಳು ಬಂದಿರುವ ಮಾಹಿತಿಯ ಆಧಾರದ ಮೇಲೆ ಪುಣೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅದರಲ್ಲಿಯೂ ಹೆಚ್ಚಾಗಿ ಕಪಲ್​ ಚಾಲೆಂಜ್​ನಲ್ಲಿ ಹಾಕಿರುವ ಫೋಟೋಗಳನ್ನು ತಿರುಚಿ, ಅದನ್ನು ಪೋರ್ನ್​ ವೆಬ್​ಸೈಟ್​ಗಳಿಗೆ ಅಪ್​ಲೋಡ್​ ಮಾಡುವ ಮೂಲಕ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಂಥ ಫೋಟೋಗಳನ್ನು ದುರುಪಯೋಗ ಪಡಿಸಿಕೊಂಡಿರುವ ಹಲವಾರು ಕಂಪ್ಲೇಂಟ್​ಗಳು ತಮಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್​ಲೋಡ್​ ಮಾಡುವ ಮೊದಲು ಎರಡೆರಡು ಬಾರಿ ಯೋಚಿಸಿ ಎಂದು ಟ್ವಿಟ್ಟರ್ ಖಾತೆಯ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ. ಒಂದು ವೇಳೆ ಯಾವುದೇ ಅನುಮಾನ ಮೂಡಿದರೂ ಕೂಡಲೇ ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದೂ ಪುಣೆ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss