Wednesday, June 29, 2022

Latest Posts

ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್​ಗೆ ಕೊರೋನಾ​ ಪಾಸಿಟಿವ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್​ಗೆ ಕೊರೋನಾ​ ಸೋಂಕು ದೃಢಪಟ್ಟಿದೆ.
ರೋಗ ಲಕ್ಷಣಗಳು ಕಾಣಿಸಿಕೊಂಡ ನಂತರ ಮ್ಯಾಕ್ರನ್​ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ.
ಸೋಂಕು ದೃಢಪಟ್ಟ ಹಿನ್ನೆಲೆ ಏಳು ದಿನಗಳವರೆಗೆ ಅವರು ಐಸೋಲೇಟ್​ ಆಗಲಿದ್ದು, ಅಲ್ಲಿಂದಲೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಎಲಿಸೀ ಪ್ಯಾಲೇಸ್ ಹೇಳಿಕೆಯಲ್ಲಿ ತಿಳಿಸಿದೆ.
ಈಗಾಗಲೇ ಫ್ರಾನ್ಸ್ ಸರ್ಕಾರ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಕಾರಣ ಈ ವಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಕೋವಿಡ್​ ಪ್ರಾರಂಭವಾದಾಗಿನಿಂದ ಇದುವರೆಗೆ ದೇಶದಲ್ಲಿ ಒಟ್ಟು 2 ಮಿಲಿಯನ್ ಜನರು ಸೋಂಕಿಗೆ ತುತ್ತಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss