Saturday, June 25, 2022

Latest Posts

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್‌ ಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ: ಇಬ್ಬರ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರಾನ್ ಅವರಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ್ದು, ಈ ಸಂಬಂಧ ಇಬ್ಬರನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ನಡೆದಿದೆ.
ಆಗ್ನೇಯ ಫ್ರಾನ್ಸ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮನ್ನು ನೋಡು ಸೇರಿದ್ದ ಜನರೊಂದಿಗೆ ಚರ್ಚೆ ನಡೆಸಲು ಮ್ಯಾಕ್ರಾನ್ ಕಾರಿನಿಂದ ಇಳಿದು ಮಾತನಾಡುತ್ತಿದ್ದಾಗ ಅದೇ ಗುಂಪಿನಲ್ಲಿದ್ದ ದುಷ್ಕರ್ಮಿಯೋರ್ವ ಅಚಾನಕ್ ಆಗಿ ನುಗ್ಗಿಬಂದು ಮ್ಯಾಕ್ರಾನ್ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾನೆ.ಈ ಕೂಡಲೇ ಭದ್ರತಾ ಸಿಬ್ಬಂದಿಗಳು ಅವರನ್ನು ರಕ್ಷಿಸಿ ಆ ಇಬ್ಬರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮತ್ತೆ ಅಧ್ಯಕ್ಷರು ಜನಸಮೂಹದೊಂದಿಗೆ ಮತ್ತೆ ಹ್ಯಾಂಡ್‌ಶೇಕ್‌ ವಿನಿಮಯ ಮುಂದುವರೆಸಿದರು ಎಂದು ಫ್ರೆಂಚ್ ಅಧ್ಯಕ್ಷರ ಅಧಿಕೃತ ನಿವಾಸ ಎಲಿಸೀ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss