Wednesday, July 6, 2022

Latest Posts

ಬಂಗಾಳಕೊಲ್ಲಿಯಲ್ಲಿ ಕಂಡಿದೆ ಸುಳಿಗಾಳಿ: ರಾಜ್ಯದಲ್ಲಿ ಮತ್ತೆ ಭರ್ಜರಿ ಮಳೆಯ ನಿರೀಕ್ಷೆ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳಕೊಲ್ಲಿಯ ಮೇಲ್ಮೈನಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಮತ್ತೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬುಧವಾರದ ಬಳಿಕ ಮುಂದಿನ ಎರಡು ದಿನಗಳಕಾಲ ರಾಜ್ಯದ ಹಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 25 ರಂದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಕಾಣಿಸಿಕೊಳ್ಳಬಹುದು. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಭಾಗದಲ್ಲಿ ನವೆಂಬರ್ 26 ರಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss