Friday, July 1, 2022

Latest Posts

ಬಂಗಾಳಕೊಲ್ಲಿಯಲ್ಲಿ ನಿಮ್ನ ಒತ್ತಡ: ಕರಾವಳಿಯಲ್ಲಿ ಅತ್ಯಂತ ಭಾರೀ ಮಳೆಯ ಮುನ್ಸೂಚನೆ

ಉಡುಪಿ: ಬಂಗಾಳಕೊಲ್ಲಿಯಲ್ಲಿ ನಿಮ್ನ ಒತ್ತಡದ ಪರಿಣಾಮ ಕರ್ನಾಟಕ ರಾಜ್ಯದ ಮೇಲೂ ಆಗಿದ್ದು, ನಾಳೆ ರಾಜ್ಯ ಕರಾವಳಿಯಲ್ಲಿ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಶನಿವಾರ ರಾತ್ರಿ ಉಡುಪಿ ಜಿಲ್ಲೆಯ ಕಟಪಾಡಿ, ಕಾಪು, ಪಡುಬಿದ್ರೆ, ಮಿಯಾರು, ಕಲ್ಯಾ, ಕುಕ್ಕುಂದೂರು ಸುತ್ತಮುತ್ತ ಪ್ರದೇಶದಲ್ಲಿ ಕೆಲವು ತಾಸುಗಳ ಕಾಲ ಕುಂಭದ್ರೋಣ ಮಳೆ ಸುರಿದಿದೆ. ನಂತರ ತಡ ರಾತ್ರಿಯವವರೆಗೂ ಜಿಲ್ಲೆಯ ಹಲವೆಡೆ ಮಳೆಯಾಗಿತ್ತು. ಭಾನುವಾರ ಜಿಲ್ಲೆಯಾದ್ಯಂತ ಮೋಡದ ವಾತಾವರಣ ಮುಂದುವರಿದಿದೆ.
ಭಾರತೀಯ ಹವಾಮಾನ ಇಲಾಖೆ ಭಾನುವಾರ ಮಧ್ಯಾಹ್ನ ಮತ್ತು ಸಂಜೆಯ ವರದಿಯ ಪ್ರಕಾರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನ ಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ನಾಳೆ ಬೆಳಗ್ಗೆ 8.30ರಿಂದ ಅ. 13ರ ಬೆಳಗ್ಗೆ 8.30ರವರೆಗೆ 205 ಮಿ.ಮೀ.ಗೂ ಹೆಚ್ಚು ಪ್ರಮಾಣದಲ್ಲಿ ಗುಡುಗಿನಿಂದ ಕೂಡಿದ ಮಳೆ ಸುರಿಯುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 23ಮಿ.ಮೀ. ಮಳೆಯಾಗಿದೆ. ಕುಂದಾಪುರ ತಾಲೂಕಿನಲ್ಲಿ 12.5 ಮಿ.ಮೀ., ಉಡುಪಿ ತಾಲೂಕಿನಲ್ಲಿ 25 ಮಿ.ಮೀ. ಮತ್ತು ಕಾರ್ಕಳ ತಾಲೂಕಿನಲ್ಲಿ 31ಮಿ.ಮೀ. ಮಳೆ ಬಿದ್ದಿದೆ. ಇದೇ ಅವಧಿಯಲ್ಲಿ ಉಡುಪಿ ಜಿಲ್ಲೆಯ ಮಿಯಾರು ಗ್ರಾಮದಲ್ಲಿ ಗರಿಷ್ಠ 90 ಮಿ.ಮೀ. ಮಳೆ ದಾಖಲಾಗಿದೆ. ಕಲ್ಯಾ ಗ್ರಾಮದಲ್ಲಿ 68 ಮಿ.ಮೀ. ಮಳೆ ಸುರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss