Thursday, August 11, 2022

Latest Posts

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ಪೂರ್ವ ಅಲೆಗಳ ಪರಿಣಾಮದಿಂದ ಜ.8 ಮತ್ತು ಜ.9ಕ್ಕೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜ.8 ಮತ್ತು ಜ.9ಕ್ಕೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀನಿಂದ 115.5 ಮಿ.ಮೀನವರೆಗೆ ಭಾರೀ ಮಳೆಯಾಗುವ ಸಾಧ್ಯತೆವಿದ್ದು, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ವಿವಿಧೆಡೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss