ಬಂಟ್ವಾಳ: ಕೊರೊನಾ ಸೋಂಕಿನಿಂದ ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ವ್ಯಾಪಕ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರ ನಿರ್ದೇಶನದಂತೆ ಬಂಟ್ವಾಳ ಆಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಕೊರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಮನೆಯ ಸುತ್ತಮುತ್ತ ಕಾಮತ್ ಲೇನ್ ಪರಿಸರದುದ್ದಕ್ಕು ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದ್ದಾರೆ.
ಪುರಸಭಾ ಸದಸ್ಯ ಗೋವಿಂದಪ್ರಭು ಅವರು ಈ ಸಂದರ್ಭ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.