Wednesday, August 17, 2022

Latest Posts

ಬಂಟ್ವಾಳ| ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಣ್ಣ- ತಂಗಿ ಆತ್ಮಹತ್ಯೆ

ಬಂಟ್ವಾಳ: ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೈದ ದಾರುಣ ಘಟನೆ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿ ಗಾರ್(42) , ಕೇಸರಿ ( 39) ಮೃತಪಟ್ಟ ದುರ್ದೈವಿಗಳು.
ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯಗೈದಿದ್ದಾರೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಡುವ ಸದ್ದು ಕೇಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಸಾಗಿಸಿದರಾದರೂ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.
ಮಾಹಿತಿ ತಿಳಿದು ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನೀಲಯ್ಯ ಅವರು ಈ ಹಿಂದೆ ಕೈ ಮಗ್ಗ ನಡೆಸುತ್ತಿದ್ದು, ಅನಾರೋಗ್ಯದಿಂದ ನಿಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!