Tuesday, August 16, 2022

Latest Posts

ಬಂದ್ ವೇಳೆ ಕಾನೂನು ಮೀರಿ ನಡೆದುಕೊಂಡರೆ ಕಠಿಣ ಕ್ರಮ: ಬಾಗಲಕೋಟೆ ಎಸ್ಪಿ ಖಡಕ್ ಸೂಚನೆ 

ಬಾಗಲಕೋಟೆ: ರೈತಪರ‌ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತಗಾಗಿ ಕೆಎಸ್ ಆರ್ ಪಿ , ಜಿಲ್ಲಾ ಸಶಸ್ತ್ರಮೀಸಲು ಪಡೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತಗಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸಾರ ತಿಳಿಸಿದ್ದಾರೆ.
ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದ್ ವೇಳೆ ಬಂದೋಬಸ್ತಗಾಗಿ ನಿಯೋಜಿಸಲಾಗಿದೆ. ಪ್ರತಿಭಟನೆ ನಡೆಸುವವರು ಶಾಂತಿಯುತವಾಗಿ ಹೋರಾಟ ಮಾಡಬೇಕು.ಪ್ರತಿಭಟನಾಕಾರರು ಕಾನೂನು ಮೀರಿ ನಡೆದುಕೊಂಡರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಷರಿಕೆಯನ್ನು ಎಸ್ಪಿಯವರು ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸುವವರು ಕೋವಿಡ್-19 ಹಿನ್ನೆಲೆಯಲ್ಲಿ ತಮ್ಮ ಆರೋಗ್ಯದ ದೃಷ್ಟಿಯಿಂದ ಮಾಸ್ಕ ಹಾಗೂ ಸ್ಯಾನಿಟೈಸರ್ ಬಳಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss