Thursday, August 11, 2022

Latest Posts

ಬಜೆಟ್ ನಲ್ಲಿನ ಎಲ್ಲಾ ಕಾರ್ಯಕ್ರಮವೂ ಅನುಷ್ಠಾನಕ್ಕೆ ಬರಲಿದೆ: ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ: ಸಿಎಂ ಬಿ.ಎಸ್. ವೈ

ಹೊಸದಿಗಂತ ವರದಿ, ಮಂಗಳೂರು:

ಬಜೆಟ್ ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರಕಾರ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜನತೆಯ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಸರಕಾರ ಹಂತ ಹಂತವಾಗಿ ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಘೋಷಿಸಿದ ಯಾವುದೇ ಯೋಜನೆ ಬಾಕಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಈಗಾಗಲೇ ರೂ. 50 ಕೋಟಿ ಅನುದಾನ ನೀಡಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಂಗಳೂರಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಯಡಿ 125 ಕೋಟಿ ಒದಗಿಸಲಾಗಿದೆ. ಮೀನುಗಾರಿಕೆ ಅಭಿವೃದ್ಧಿ, ಕರಾವಳಿ ಆಂತರಿಕ ಭದ್ರತೆಗೆ ಆದ್ಯತೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ನೀಡಿದೆ. ಪ್ರವಾಸೋದ್ಯಮ ಕ್ಷೇತ್ರ ಮುಂದಿನ 6 ತಿಂಗಳಲ್ಲಿ ಹೊಸ ಬದಲಾವಣೆ ಕಾಣಲಿದೆ. ಈ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss