ಬರಬೇಡಿ ಎಂದರೂ ಹರಿದುಬರುತ್ತಿದೆ ಭಕ್ತಸಾಗರ: ಸಾಮಾಜಿಕ ಅಂತರ ಇಲ್ಲವೇ ಇಲ್ಲ!

0
191

ಸಾಗರ: ಕೋವಿಡ್-19ರ ಸಂಕಷ್ಟ ಮುಗಿಯುವವರೆಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭಕ್ತರು ಆಗಮಿಸಬಾರದು ಎಂದು ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ರವಿ ಸಿಗಂದೂರು ಹಾಗೂ ತುಮರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಮನವಿ ಮಾಡಿದ್ದಾರೆ.
ಕೊರೋನಾ ಸೋಂಕು ಹರಡುವ ಭೀತಿಯಲ್ಲಿ ಈಗಾಗಲೇ ದೇವಾಲಯದ ಬಾಗಿಲು ಮುಚ್ಚಿದ್ದರೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬಂದು ದೇವಸ್ಥಾನದ ಹೊರಗೆ ಕೈಮುಗಿದು ಮರಳುತ್ತಿದ್ದಾರೆ. ಇದರಿಂದಾಗಿ ಸಿಗಂದೂರಿಗೆ ಬರುವ ಲಾಂಚ್‌ನಲ್ಲಿ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಹಲವೆಡೆ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಿಗಂದೂರಿಗೆ ಪ್ರವಾಸಿಗರು ಬರಲು ಕೆಲವು
ನಿರ್ಬಂಧಗಳನ್ನು ಜಿಲ್ಲಾಡಳಿತ ಹೇರಬೇಕು ಎಂದು ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here