Sunday, April 11, 2021

Latest Posts

ಬಲವಂತವಾಗಿ ಮದ್ಯ ಕುಡಿಸಿ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ವಿರುದ್ಧ ದೂರು ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಸ್ನೇಹಿತನ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಗೆ ಕರೆದೊಯ್ದು ವ್ಯಕ್ತಿಯೊಬ್ಬ ಬಲವಂತವಾಗಿ ಮಹಿಳೆಗೆ ಮದ್ಯ ಕುಡಿಸಿದ್ದಾನೆ. ಮದ್ಯ ಕುಡಿದ ಮಹಿಳೆ ಅರೆಪ್ರಜ್ಞೆಯಲ್ಲಿ ಇದ್ದಾಗ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ವಿರುದ್ಧ ದೂರು ದಾಖಲಾಗಿದೆ.

ಸಂತ್ರಸ್ತೆ ಬೆಂಗಳೂರಿನ ಶ್ರೀನಿವಾಸ ನಗರದವಳೆಂಬುದಾಗಿ ತಿಳಿದುಬಂದಿದ್ದು, ಅತ್ಯಾಚಾರ ಎಸಗಿದ ಆರೋಪಿ ೩೧ ವರ್ಷದ ವಾಸಿಂ ಪಾಷಾ ಎಂದು ಗುರುತಿಸಲಾಗಿದೆ. ಈ ಘಟನೆಯ ಬಗ್ಗೆ ಕೊಡಿಗೆಹಳ್ಳಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

2011 ರಲ್ಲಿ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ವಾಸಿಂ ಪಾಷಾ ಚಾಟಿಂಗ್ ಮಾಡುತ್ತಿದ್ದ. ನಂತರದಲ್ಲಿ ಇಬ್ಬರ ನಡುವೆ ಗೆಳೆತನವಾಗಿ ಪ್ರೀತಿಸಿದ್ದಾರೆ. ಸ್ನೇಹಿತನ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಗೆ ಕರೆದುಕೊಂಡು ಹೋಗಿದ್ದ ಆರೋಪಿ ಬಲವಂತವಾಗಿ ಮದ್ಯ ಕುಡಿಸಿದ್ದ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದನ್ನು ಪ್ರಶ್ನಿಸಿದಾಗ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. 30 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾನೆ. ಮದುವೆಯಾಗಲು ಹೇಳಿದ್ದಕ್ಕೆ ಧರ್ಮದ ವಿಚಾರ ತೆಗೆದು ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss