ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಶುಕ್ರವಾರ ಬರೋಬ್ಬರಿ 133 ಜನರಿಗೆ ಸೊಂಕು ಇರುವುದು ದೃಢಪಟ್ಟಿದ್ದು, 41ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 2200ಕ್ಕೆ ತಲುಪಿದೆ. ಬಿಡುಗಡೆಯಾದವರ ಸಂಖ್ಯೆ 1207ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹೊಸಪೇಟೆ, ಕಂಪ್ಲಿ, ಹಡಗಲಿ, ಸಿರುಗುಪ್ಪ, ಬಳ್ಳಾರಿ, ಸಂಡೂರು ಸೇರಿದಂತೆ ಜಿಲ್ಲೆಯ ನಾನಾ ಪತ್ತೆಯಾದ 2200 ಪ್ರಕರಣಗಳಲ್ಲಿ ಇಲ್ಲಿವರೆಗೆ 54 ಜನ ಸೊಂಕಿತರು ಬಲಿಯಾಗಿದ್ದು,
1207ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 939 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.