Thursday, August 11, 2022

Latest Posts

ಬಳ್ಳಾರಿಯಲ್ಲಿ ಮತ್ತೆ 338 ಜನರಿಗೆ ಸೋಂಕು ದೃಢ, 244 ಜನ ಗುಣಮುಖ ಬಿಡುಗಡೆ, 2 ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊವೀಡ್-19 ಅಟ್ಟಹಾಸ ಮುಂದುವರೆದಿದ್ದು ಬುಧವಾರ ಬರೋಬ್ಬರಿ 338 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5636 ಕ್ಕೆ ಎರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾಗಿದ್ದ ಪ್ರಕರಣಗಳಲ್ಲಿ 244 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಪತ್ತೆಯಾದ ಪ್ರಕರಣಗಳಲ್ಲಿ 2463 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. ಇಬ್ಬರು ಬುಧವಾರ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಇಲ್ಲಿವರೆಗೆ ಬಲಿಯಾದವರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ. 3085 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss