ಬಳ್ಳಾರಿ:ನಗರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಮಂಗಳವಾರ ಆಚರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರು ಶ್ರೀಕೃಷ್ಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಪ್ರತಿವರ್ಷ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಕೋವಿಡ್ ಹಿನ್ನೆಲೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಶ್ರೀಕೃಷ್ಣರ ತತ್ವಾದರ್ಶಗಳು ಹಾಗೂ ಗೀತೋಪದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದರು.
ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಪಿ.ತಿಮ್ಮಪ್ಪ ಯಾದವ್ ಅವರು ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭಾಯಷಗಳನ್ನು ತಿಳಿಸಿದರು.
ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದ ಕಾರ್ಯದರ್ಶಿ ಕೆ.ಇ.ಚಿದಾನಂದಪ್ಪ, ಸಮಾಜದ ಮುಖಂಡರಾದ ಗಿರಿ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿಗಳಾದ ನೇತ್ರಾವತಿ, ನೀಲಮ್ಮ, ಯು. ಗಾದಿಲಿಂಗಪ್ಪ ,ರಾಮು ಸೇರಿದಂತೆ ಇತರರು ಇದ್ದರು.