Saturday, July 2, 2022

Latest Posts

ಬಳ್ಳಾರಿಯಲ್ಲಿ ಸೋಮವಾರ ಬರೋಬ್ಬರಿ 104 ಜನರಿಗೆ ಸೋಂಕು ದೃಢ

ಬಳ್ಳಾರಿ: ಜಿಲ್ಲೆಯಲ್ಲಿ ಮಹಾ ಹೆಮ್ಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಸೋಮವಾರ ಬರೋಬ್ಬರಿ 104 ಜನರಿಗೆ ಸೋಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1787ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಸಂಡೂರು, ಹೊಸಪೇಟೆ, ಕೂಡ್ಲಿಗಿ, ಬಳ್ಳಾರಿ ಸೇರಿದಂತೆ ನಾನಾ ಕಡೆ ಸೋಮವಾರ 104 ಜನರಿಗೆ ಸೋಂಕು ವಕ್ಕರಿಸಿದೆ. ಇಲ್ಲಿವರೆಗೆ ಜಿಲ್ಲೆಯಲ್ಲಿ ಪತ್ತೆಯಾದ 1787 ಪ್ರಕರಣಗಳಲ್ಲಿ ಇಲ್ಲಿವರೆಗೆ 1024 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 722 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 42 ಜನ ಸೊಂಕಿತರು ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss