ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಗುರುವಾರ 203 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,854 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 80 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 25,192 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. 10 ಜನ ಸೋಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 428 ಕ್ಕೆ ಏರಿಕೆಯಾಗಿದೆ. 4154 ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.