Wednesday, June 29, 2022

Latest Posts

ಬಳ್ಳಾರಿಯಲ್ಲಿ 264 ಜನರಿಗೆ ಸೋಂಕು ದೃಢ, 274 ಜನ ಗುಣಮುಖ, 7 ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಸೋಮವಾರ 264 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 27,077 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 274 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 22,002 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. 7 ಜನ ಸೋಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 353 ಕ್ಕೆ ಏರಿಕೆಯಾಗಿದೆ. 4722 ಸೋಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss