Saturday, August 13, 2022

Latest Posts

ಬಳ್ಳಾರಿಯಲ್ಲಿ 310 ಜನರಿಗೆ ಕೊರೋನಾ ಪಾಸಿಟಿವ್ ದೃಢ, 635 ಮಂದಿ ಗುಣಮುಖ, 9 ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ 310 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 30,943 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 635 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 26,561 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. 9 ಜನ ಸೊಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 452 ಕ್ಕೆ ಏರಿಕೆಯಾಗಿದೆ. 4264 ಸೊಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss