Wednesday, August 17, 2022

Latest Posts

ಬಳ್ಳಾರಿಯಲ್ಲಿ 312 ಜನರಿಗೆ ಸೋಂಕು ದೃಢ, 442 ಜನ ಸೋಂಕಿತರು ಗುಣಮುಖ, 6 ಜನ ಸೋಂಕಿಗೆ ಬಲಿ

ಬಳ್ಳಾರಿ:  ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಸೋಮವಾರ 312 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18,001 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 442 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 12,152 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. 6 ಜನ ಸೋಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 224ಕ್ಕೆ ಏರಿಕೆಯಾಗಿದೆ. 5625 ಸೋಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!