Thursday, July 7, 2022

Latest Posts

ಬಳ್ಳಾರಿಯಲ್ಲಿ 681 ಜನರಿಗೆ ಕೊರೋನಾ ದೃಢ, 629 ಜನ ಸೋಂಕಿತರು ಗುಣಮುಖ, 8 ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಬುಧವಾರ 681 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 15,753ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 629 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 10,091 ಜನರು ಬಿಡುಗಡೆಯಾದಂತಾಗಿದೆ. 8 ಜನ ಸೊಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 187 ಕ್ಕೆ ಏರಿಕೆಯಾಗಿದೆ. 5475 ಸೊಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss