ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ನೋವೆಲ್ ಕೊರೋನಾ ಸಂಪೂರ್ಣ ನಿಯಂತ್ರಣ ಕೈತಪ್ಪಿದ್ದು, ಸೋಮವಾರ ಬರೋಬ್ಬರಿ 840 ಜನರಿಗೆ ಸೊಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 4886 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 48 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ 1670 ಜನ ಸೊಂಕಿತರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಸೋಂಕಿನಿಂದ ಬಳಲುತ್ತಿದ್ದ 7 ಜನರು ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಸೊಂಕಿಗೆ ಬಲಿಯಾದವರ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಪತ್ತೆಯಾದ 4886 ಪ್ರಕರಣಗಳಲ್ಲಿ , 1670 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 3134 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 82 ಜನ ಸೊಂಕಿತರು ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ.