ಬಳ್ಳಾರಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಜಿಲ್ಲೆಯ ಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಶ್ರೀ ಮೈಲಾರಲಿಂಗೇಶ್ವರ
ಸ್ವಾಮಿಯ ದೇವಸ್ಥಾನವನ್ನು ಆ. 23ರಂದು ತೆರೆಯಲಾಗುತ್ತದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ಕೊವೀಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೇಯಲ್ಲಿ ದೇವಸ್ಥಾನವನ್ನು ಮುಚ್ಚಲಾಗಿತ್ತು. ಕೆಲ ನಿಯಮಗಳ ಅನುಸಾರ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, ದೀಡ್ ನಮಸ್ಕಾರ, ದೀವಿಟಿಗೆ, ಸೇವೆ, ಕುದುರೆ ಕುಣಿತ, ಜವಳ, ದೋಣಿ ಸೇವೆ, ಚೌರಿ ಹಾಗೂ ದೇವಸ್ಥಾನದಲ್ಲಿ ಉಳಿದುಕೊಳ್ಳುವುದು ಮತ್ತು ಅನ್ನದಾಸೋಹ ಇತ್ಯಾದಿ ಸೇವೆಗಳಿಗೆ ಅವಕಾಶ ಇರುವುದಿಲ್ಲ. ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ದರ್ಶನ ಪಡೆಯ ಬಹುದಾಗಿದೆ ಎಂದು ತಿಳಿಸಿದ್ದಾರೆ.