ಬಳ್ಳಾರಿ: ಗಣಿನಗರಿ ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬರಿಗೆ ಹೆಮ್ಮಾರಿ ಕೊರೊನಾ ಸೊಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಉತ್ತರಪ್ರದೇಶದಿಂದ ಆಗಮಿಸಿದ ವ್ಯಕ್ತಿಯನ್ನು ಕ್ವಾರೆಂಟ್ಯನ್ ನಲ್ಲಿ ಇರಿಸಿ ಗಂಟಲ ದ್ರವದ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಸೊಂಕು ಇರುವುದು ದೃಢಪಟ್ಟಿದೆ.
ಸೊಂಕಿತ ವ್ಯಕ್ತಿ ಕ್ವಾರೆಂಟ್ಯನ್ ನಲ್ಲಿ ಇರುವುದರಿಂದ 100 ಮಿಟರ್ ಲಾಕ್ ಡೌನ್ ಮಾಡುವ ಪ್ರಕ್ರಿಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕೂಡಲೆ ಸೊಂಕಿತ ವ್ಯಕ್ತಿಯನ್ನು ನಗರದ ಕೊವೀಡ್-19 ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾಡಳಿತವು ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದ ಪುರುಷ ನರ್ಸ್ ಒಬ್ಬರಿಗೆ ಮಂಗಳವಾರ ಹೆಮ್ಮಾರಿ ವಕ್ಕಿರಿಸಿದ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಹೊರ ರಾಜ್ಯದಿಂದ ಬಂದ ವ್ಯಕ್ತಿಗಳಲ್ಲೆ ಪ್ರಕರಣಗಳು ಪತ್ತೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಸ್ವಲ್ಪ ಸಮಾಧಾನ ತಂದಿದೆ. ಆದರೆ, ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅವರಿಂದ ಮತ್ತೆ ಬೇರೆಯವರಿಗೆ ಹರಡದಂತೆ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ನಾಗರಿಕರು ಒತ್ತಾಯಿಸಿದ್ದಾರೆ.