ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯವರಿಗೆ ಪ್ರತ್ಯೇಕ ಕೊವೀಡ್ ಕೇರ್ ಸೆಂಟರ್ ನ್ನು ಸ್ಥಾಪಿಸಲಾಗಿದ್ದು, ಸದ್ಯ 36 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ತಿಳಿಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ 36 ಜನರೂ ಶೀಘ್ರದಲ್ಲೇ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಲಿ ಎಂದು ಪ್ರಾರ್ಥಿಸುವೆ. ಜಿಲ್ಲೆಯಲ್ಲಿ ಇಲ್ಲಿವರೆಗೆ 350 ಜನರಿಗೆ ನೋವೆಲ್ ಕೊರೋನಾ ದೃಢಪಟ್ಟಿದ್ದು, ಗುಣಮುಖರಾಗಿ ಇತ್ತೀಚೆಗೆ ಬಿಡುಗಡೆಯಾದ 56 ಜನರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿದರೂ, ಸಾರ್ವಜನಿಕರ ಸಮಸ್ಯೆಗಳಿಗೆ ನಾವು ಉತ್ತಮವಾಗಿ ಸ್ಪಂದಿಸಿದ್ದೇವೆ. ಕೆಲ ಠಾಣೆಗಳಲ್ಲಿ ಸಿಬ್ಬಂದಿ ಹಾಗೂ ಮೇಲಧಿಕಾರಿಗಳ ಅನುಪಸ್ಥಿತಿಯಲ್ಲೇ ಠಾಣೆಯ ಪೊಲೀಸರು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.