Sunday, August 14, 2022

Latest Posts

ಬಳ್ಳಾರಿ| ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ: ಮನೆ ಮನೆ ಸರ್ವೆ

ಬಳ್ಳಾರಿ: ಜಿಲ್ಲೆಯಲ್ಲಿ ನೋವೆಲ್ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹೆಚ್ಚು ಪ್ರಕರಣಗಳು ಪತ್ತೆಯಾದ ತಾಲೂಕುಗಳಾದ ಸಂಡೂರು, ಹೊಸಪೇಟೆ, ಬಳ್ಳಾರಿ ಸೇರಿದಂತೆ ನಾನಾ ಕಡೆ ಮನೆ ಮನೆ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದೆ. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮನೆ ಮನೆ ಸರ್ವೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ವೇಳೆ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಕಲ್ಪಿಸಲಾಗುವುದು. ತೀವ್ರ ಉಸಿರಾಟದ ತೊಂದರೆ ಸೇರಿದಂತೆ ಸೋಂಕಿನಿಂದ ಬಳಲುತ್ತಿದ್ದವರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ಮೃತರ ಸಂಖ್ಯೆ ಕಡಿಮೆಯಾಗಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss