ಬಳ್ಳಾರಿ: ಕೊರೋನಾ ವೈರಸ್ನಿಂದ 8 ಜನರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಅವರನ್ನು ಬುಧುವಾರ ಸಂಜೆ ಬಿಡುಗಡೆ ಮಾಡಲಾಯಿತು.
ಜಿಲ್ಲಾಸ್ಪತ್ರೆಯಲ್ಲಿ ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದುವರೆಗೆ 100 ಜನರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.
ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರ ವಿವರ: ಪಿ 6419 34 ವರ್ಷದ ಗಂಡು ಗಾಂಧಿ ನಗರ,ಪಿ 6420 59 ವರ್ಷದ ಗಂಡು ಎಚ್ ಸಿ ಡಬ್ಲೂ ಜಿಲ್ಲಾಸ್ಪತ್ರೆ, ಪಿ 6435 31 ವರ್ಷದ ಗಂಡು ವಡ್ಡು ಜೆಎಸ್ ಡಬ್ಲೂ, ಪಿ 6438 29ವರ್ಷದ ಗಂಡು ಸಿರಗುಪ್ಪ ದವರು, ಪಿ 6460 29 ವರ್ಷದ ಗಂಡು ತಾಳೂರಿನವರು, ಪಿ 6465 42 ವರ್ಷದ ಗಂಡು ಶಂಕರಗುಡ್ಡ ತೋರಣಗಲ್ಲು, ಪಿ 6493 42ವರ್ಷದ ಗಂಡು ನಾಗಲಾಪುರದ ಸಂಡೂರು, ಪಿ 6505 46ವರ್ಷದ ಗಂಡು ತಾಳೂರಿನವರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು. ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮ ಸ್ಥೆರ್ಯವನ್ನು ತುಂಬಿ ಅವರನ್ನು ಗುಣಮುಖರಾಗಲು ಬಹಳ ಶ್ರಮವಹಿಸಿದೆವು; ಇನ್ನು ಉಳಿದವರನ್ನು ಆದಷ್ಟು ಬೇಗ ಗುಣಮುಖರನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ದೈವಿಕ್, ಹಿರಿಯ ತಜ್ಞರಾದ ಡಾ.ಪ್ರಕಾಶ್ ಭಾಗವತಿ, ಡಾ.ಉದಯ್ ಶಂಕರ್,ಡಾ.ಮದು ಜುಮ್ಲ,ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ ಸೇರಿದಂತೆ ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿಗಳು ಇದ್ದರು.