Wednesday, July 6, 2022

Latest Posts

ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಎಸ್ಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಶಾಸಕ ನಾಗೇಂದ್ರ ಭೇಟಿ ಪರಿಶೀಲನೆ

ಬಳ್ಳಾರಿ: ಕೊರೋನಾ ಸೊಂಕಿನ ಭಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳ ಪಾಲಕರು ಅತಂಕದಲ್ಲಿರುವುದನ್ನ ಮನಗಂಡು ಬಳ್ಳಾರಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೋಕಾ ಹಾಗೂ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ಬರುವ ಸೆಂಟ್ ಜಾನ್ಸ್ ನ‌ ಪರೀಕ್ಷಾ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರಲ್ಲದೆ ಖುದ್ದಾಗಿ ಮುಂದೆ ನಿಂತು ಪರೀಕ್ಷಾ ಕೊಠಡಿಗಳಲ್ಲಿ ರಾಸಾಯನಿಕ ಸಿಂಪಡನೆ ಮಾಡುವ ಮೂಲಕ ಸ್ಯಾನಿಟೈಸೇಷನ್ ಮಾಡಿಸಿದರು.
ನಂತರ ಅಧಿಕಾರಿಗಳ ಜೊತೆ ಮಾತನಾಡಿ ಪರಿಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿಗಳ ಮಧ್ಯೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹಾಗೂ ಪ್ರತಿಯೊಬ್ಬ ಪರೀಕ್ಷಾರ್ಥಿಗೆ ಕಡ್ಡಾಯವಾಗಿ ಮಾಸ್ಕ್ ನೀಡುವಂತೆ ಸೂಚಿಸಿದರು.
ಈ ಸಂದರ್ಭ  ಕ್ಷೇತ್ರ ಶಿಕ್ಷಣಾಧಿಕಾರಿ‌ ಸಿದ್ದಲಿಂಗಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ
ಬಸಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss