ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಮಂಗಳವಾರ 314 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 31,421 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 295 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 28,345 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. ಇಬ್ಬರು ಸೊಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 460 ಕ್ಕೆ ಏರಿಕೆಯಾಗಿದೆ.2616 ಸೊಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.