Thursday, August 18, 2022

Latest Posts

ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಬ್ಬ ಸೊಂಕಿತ ವ್ಯಕ್ತಿ ಗುಣಮುಖ

ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೊಬ್ಬ ಸೊಂಕಿತ ವ್ಯಕ್ತಿ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಜಿಲ್ಲೆಯ ಕಂಪ್ಲಿ ಪಟ್ಟಣದ ೩೪ ವರ್ಷದ ಪಿ.೮೬೩ ಸೊಂಕಿತ ವ್ಯಕ್ತಿ ಗುಣಮುಖರಾಗಿದ್ದು, ಡಿಸ್ಟ್ರಿಕ್ಟ್ ಸರ್ಜನ್ ಡಾ. ಬಸರೆಡ್ಡಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ಈ ವ್ಯಕ್ತಿ ಸೇರಿ ಜಿಲ್ಲೆಯಲ್ಲಿ ಇಲ್ಲಿವರೆಗೆ ೧೬ ಜನರು ಕೊರೊನಾ ಹೆಮ್ಮಾರಿ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಂತಾಗಿದೆ. ಒಟ್ಟು ೩೭ ಸೊಂಕಿತರಲ್ಲಿ ೧೬ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ, ೬೧ ವರ್ಷದ ವ್ಯಕ್ತಿ ಯೊಬ್ಬ ಮ್ರತಪಟ್ಟಿದ್ದು, ಉಳಿದ ೨೦ ಜನರು ಜಿಲ್ಲಾ ಕೊವೀಡ್_೧೯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಯೋಗಾನಂದರೆಡ್ಡಿ, ಆರ್.ಎಂ.ಒ ಡಾ.ಮಲ್ಲಿಕಾರ್ಜುನ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ, ಸುಧಾಕರ್, ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!