ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರಣಕೇಕೆ ಮುಂದುವರೆಸಿದ್ದು, ಬುಧವಾರ ಬರೋಬ್ಬರಿ 18 ಜನರಿಗೆ ವಕ್ಕರಿಸಿದೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 337 ಕ್ಕೆ ಏರಿಕೆ ಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಜಿಲ್ಲೆಯಲ್ಲಿ ಎರಡಂಕಿಯಲ್ಲಿದ್ದ ಕೊರೋನಾ ಪ್ರಕರಣಗಳು ತ್ರಿಶತಕ ಬಾರಿಸಿದ್ದು, ಜನರಲ್ಲಿ ಭಯ ಹುಟ್ಟಿಸಿದೆ. ಜಿಲ್ಲೆಯ ಜಿಂದಾಲ್ ನಂಜು ಸದ್ಯಕ್ಕೆ ಕಡಿಮೆಯಾದಂತೆ ಕಾಣುತ್ತಿಲ್ಲ, ದಿನದಿಂದ ದಿನಕ್ಕೆ ಸಂಖ್ಯೆ ಎರಿಕೆಯಾಗತೊಡಗಿದೆ. ಕಂಪನಿಯ ಸುಮಾರು 200 ಜನರಿಗೆ ಹೆಮ್ಮಾರಿ ವಕ್ಕರಿಸಿದೆ. ಮೊದಲ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನು ಕ್ವಾರೆಂಟ್ಯನ್ ಮಾಡಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಗರ ಸೇರಿದಂತೆ ಜಿಲ್ಲೆಯ ಹೊಸಪೇಟೆ, ಸಂಡೂರು, ಕೂಡ್ಲಿಗಿ, ಕಂಪ್ಲಿಯಲ್ಲಿ ಜಿಂದಾಲ್ ನೌಕರರು ಹಾಗೂ ಸಿಬ್ಬಂದಿಗಳು ಹೆಚ್ಚಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.