Monday, August 8, 2022

Latest Posts

ಬಳ್ಳಾರಿ ಜಿಲ್ಲೆಯಲ್ಲಿ 275 ಜನರಿಗೆ ಕೊರೋನಾ ದೃಢ, 408 ಜನ ಸೋಂಕಿತರು ಗುಣಮುಖ, 2 ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಬರೋಬ್ಬರಿ 275 ಜನರಿಗೆ ಸೋಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6582 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 408 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಬಿಡುಗಡೆಯಾದವರ ಸಂಖ್ಯೆ 3416 ಕ್ಕೆ ಏರಿಕೆಯಾಗಿದೆ. ಮತ್ತೆ 2 ಜನ ಸೊಂಕಿಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 97 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳಲ್ಲಿ ಇಲ್ಲಿವರೆಗೆ 97 ಜನ ಸೋಂಕಿತರು ಬಲಿಯಾಗಿದ್ದು, 3416 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3069 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss