Sunday, August 14, 2022

Latest Posts

ಬಳ್ಳಾರಿ ಜಿಲ್ಲೆಯಲ್ಲಿ 317 ಜನರಿಗೆ ಕೊರೋನಾ ಪಾಸಿಟಿವ್ ದೃಢ, 208 ಜನ ಗುಣಮುಖ, 8 ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ 317 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 30,171 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 208 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ ಗುಣಮುಖರಾಗಿ 25,400 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. 8 ಜನ ಸೊಂಕಿತರು ಇಂದು ನೋವೆಲ್ ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 436 ಕ್ಕೆ ಏರಿಕೆಯಾಗಿದೆ. 4335 ಸೊಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss