Wednesday, August 17, 2022

Latest Posts

ಬಳ್ಳಾರಿ ಜಿಲ್ಲೆಯಲ್ಲಿ 333 ಜನರಿಗೆ ಕೊರೋನಾ ದೃಢ, 208 ಜನ ಸೋಂಕಿತರು ಗುಣಮುಖ, 4 ಮಂದಿ ಸಾವು

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಬರೋಬ್ಬರಿ 333 ಜನರಿಗೆ ಸೊಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 6307 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 208 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಬಿಡುಗಡೆಯಾದವರ ಸಂಖ್ಯೆ 3008 ಕ್ಕೆ ಏರಿಕೆಯಾಗಿದೆ. ಮತ್ತೆ 4 ಜನ ಸೊಂಕಿಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 95 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳಲ್ಲಿ ಇಲ್ಲಿವರೆಗೆ 95 ಜನ ಸೊಂಕಿತರು ಬಲಿಯಾಗಿದ್ದು, 3008 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3204 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!