ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಗುರುವಾರ ಬರೋಬ್ಬರಿ 431 ಜನರಿಗೆ ಸೊಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 8592ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 429 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 2 ಸೊಂಕಿತರು ಬಲಿಯಾಗಿದ್ದಾರೆ. ಇಲ್ಲಿವರೆಗೆ ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣಗಳಲ್ಲಿ 4688 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 103 ಬಲಿಯಾಗಿದ್ದಾರೆ. 3801 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.