ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, 515 ಜನರಿಗೆ ಮಹಾಮಾರಿ ವಕ್ಕರಿಸಿರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 12066ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ ಬುಧವಾರ 380 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿವರೆಗೆ ಜಿಲ್ಲೆಯಲ್ಲಿ ಗುಣಮುಖರಾಗಿ 6638 ಜನರು ಬಿಡುಗಡೆಯಾದಂತಾಗಿದೆ. 9 ಜನ ಸೊಂಕಿತರು ಇಂದು ಕೊರೋನಾಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ. 5298 ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರೀಯವಾಗಿವೆ.