ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಬುಧವಾರ ಬರೋಬ್ಬರಿ 631 ಜನರಿಗೆ ಸೊಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 8161ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 237 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಬಿಡುಗಡೆಯಾದವರ ಸಂಖ್ಯೆ 4259ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಪತ್ತೆಯಾದ ಒಟ್ಟು ಪ್ರಕರಣಗಳಲ್ಲಿ 101 ಜನ ಸೊಂಕಿತರು ಬಲಿಯಾಗಿದ್ದು, 4259 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3801 ಜನ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.