ಬಳ್ಳಾರಿ: ಚೀನಾ ಸೈನಿಕರ ಮಧ್ಯೆ ನಡೆದ ಘರ್ಷಣೆಯಲ್ಲಿ ದೇಶದ ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಇಲ್ಲಿನ ಬಾಲ ಭಾರತಿ ಶಾಲೆ ಆವರಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಬುಧವಾರ ಸಂಜೆ ನಡೆಯಿತು.
ಎರಡು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಿ, ಪ್ರಾಣ ತ್ಯಾಗ ಮಾಡಿದ ನಮ್ಮ ವೀರಯೋದರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ವಿಭಾಗ ಕಾರ್ಯದರ್ಶಿ ಕೆ.ಶ್ರೀರಾಮುಲು ಅವರು ಮಾತನಾಡಿ, ಪಾಪಿ ಚೀನಾ ಕೃತ್ಯಕ್ಕೆ ನಮ್ಮ ಸೈನಿಕರು ಪ್ರಾಣ ತ್ಯಾಗ ಮಾಡಬೇಕಾಯಿತು. ಅವರೆಲ್ಲರ ಆತ್ಮಕ್ಕೆ ದೇವರು ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಲಾಗಿದೆ. ಪ್ರತಿಯೊಬ್ಬರೂ ಪಾಪಿ ಚೀನಾ ವಸ್ತುಗಳ ಖರೀದಿಯನ್ನು ಇಂದೆ ತ್ಯಜಿಸಬೇಕು. ಯಾವುದೇ ವಸ್ತುಗಳನ್ನು ಬಳಕೆ ಮಾಡಬಾರದು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಮುಖಂಡರಾದ ನ್ಯಾಯವಾದಿ ಬಂಡ್ರಾಳ್ ಮೃತ್ಯುಂಜಯ ಸ್ವಾಮೀ, ಗೋವಿಂದ್, ರಾಹುಲ್, ಬಾಲು, ಅಶೋಕ್, ತಿಪ್ಪೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.