Thursday, February 25, 2021

Latest Posts

ಬಳ್ಳಾರಿ| 11 ಲಸಿಕಾ ಕೇಂದ್ರಗಳಲ್ಲಿ 1100 ಮಂದಿಗೆ ಕೊರೋನಾ ಲಸಿಕೆ

ಹೊಸದಿಗಂತ ವರದಿ,ಬಳ್ಳಾರಿ:

ಮೊದಲ ಸುತ್ತಿನ ಕೋವಿಡ್ ಲಸಿಕೆ ಕಾರ್ಯಕ್ರಮ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಶನಿವಾರ ನಡೆಯಿತು.

ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆಯಲ್ಲಿ ವಿಮ್ಸ್, ಜಿಲ್ಲಾಸ್ಪತ್ರೆ ಸೇರಿದಂತೆ 7 ಸಾರ್ವಜನಿಕ ಆಸ್ಪತ್ರೆಗಳು, ಮಿಲ್ಲರಪೇಟೆ ನಗರ ಆರೋಗ್ಯ ಕೇಂದ್ರ, ಚೆಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ 11 ಕಡೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ಆರೋಗ್ಯ ಸಿಬ್ಬಂದಿಗೆ ಪ್ರತಿ ಕೇಂದ್ರದಲ್ಲಿ ತಲಾ 100ರಂತೆ 1100 ಜನರಿಗೆ ಲಸಿಕೆ ನೀಡಲಾಯಿತು. ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಸೇರಿದಂತೆ 145 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇಲ್ಲಿ ಈಗಾಗಲೇ ನೋಂದಾಯಿಸಲಾಗಿರುವ ಆರೋಗ್ಯ ಸೇವಾ ಸಿಬ್ಬಂದಿಗಲಿಗೆ ಲಸಿಕೆ ಹಾಕಲು ಸಿದ್ದತೆ‌ ನಡೆದಿದೆ. ಈ ಸಂದರ್ಭದಲ್ಲಿ ಡಿಎಚ್‍ಒ ಡಾ.ಜನಾರ್ಧನ್, ಜಿಲ್ಲಾ ಆರ್ ಸಿಎಚ್ ಜಿ.ಪಂ.ಸಿಇಒ ನಂದಿನಿ, ಡಾ.ಅನಿಲಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಇತರರು ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!