ಹೊಸದಿಗಂತ ಆನ್ ಲೈನ್ ಡೆಸ್ಕ್:
ಬ್ರೆಜಿಲ್ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸುಮಾರು 37 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿವೆ.
ಈ ಘಟನೆ ಬ್ರಜಿಲ್ನ ಸಾವೋಪೋಲೋ ರಾಜ್ಯದ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ಜವಳಿ ಕಾರ್ಖಾನೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿತ್ತು ಎನ್ನಲಾಗಿದೆ. ಈ ಅಫಘಾತದಲ್ಲಿ 37 ಮಂದಿ ಸ್ಥಳದಲ್ಲಿಯೇ ಸಾವನಪ್ಪಿದ್ದು, 15 ಜನ ಗಾಯಗೊಂಡಿದ್ದಾರೆ. .
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಮಾಧ್ಯಮ ವರದಿಯ ಪ್ರಕಾರ ಬಸ್ಸಿನಲ್ಲಿ 53 ಮಂದಿ ಇದ್ದರು. ಟ್ರಕ್ ಚಾಲಕ ಈ ಭೀಕರ ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆಗೆ ಏನು ಕಾರಣ ಎಂಬ ನಿಖರ ಮಾಹಿತಿ ತಿಳಿದು ಬಂದಿಲ್ಲ.